ದೇಶದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದ್ದು, 2020ರಲ್ಲಿ 1,53,052 ಮಂದಿ ಆತ್ಮಹತ್ಯೆಗೆ ಶರಣಾಗಿದ್ದರೆ, 2021 ರಲ್ಲಿ 1,64,033 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ವರ್ಷ ಆತ್ಮಹತ್ಯೆ ಪ್ರಕರಣಗಳಲ್ಲಿ ಶೇಕಡ 7.2ರಷ್ಟು ಏರಿಕೆ ಕಂಡಿದ್ದು, ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ತಮಿಳುನಾಡು, ಮಧ್ಯಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಕರ್ನಾಟಕವಿದೆ.
ಮಾನಸಿಕ ಅಸ್ವಸ್ಥತೆ, ಆರ್ಥಿಕ ಸಂಕಷ್ಟ, ಖಿನ್ನತೆ, ಕಿರುಕುಳ, ಹಿಂಸೆ, ಕೌಟುಂಬಿಕ ಸಮಸ್ಯೆ ಮೊದಲಾದವುಗಳು ಆತ್ಮಹತ್ಯೆಗೆ ಪ್ರಮುಖ ಕಾರಣಗಳೆಂದು ಹೇಳಲಾಗಿದೆ. ಆತ್ಮಹತ್ಯೆ ಮನೋಸ್ಥಿತಿ ಉಳ್ಳವರಿಗೆ ಕೌನ್ಸೆಲಿಂಗ್ ಮಾಡುವುದರಿಂದ ಇದನ್ನು ತಪ್ಪಿಸಬಹುದಾಗಿದೆ.