alex Certify ಬೆಚ್ಚಿಬೀಳಿಸುವಂತಿದೆ ಹಾಡಹಗಲೇ ರಾಜ್ಯ ರಾಜಧಾನಿಯಲ್ಲಿ ನಡೆದಿರುವ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಚ್ಚಿಬೀಳಿಸುವಂತಿದೆ ಹಾಡಹಗಲೇ ರಾಜ್ಯ ರಾಜಧಾನಿಯಲ್ಲಿ ನಡೆದಿರುವ ಕೃತ್ಯ

ಕೆಲ ತಿಂಗಳುಗಳಿಂದ ಕಡಿಮೆಯಾಗಿದ್ದ ಸರಗಳ್ಳತನ ಪ್ರಕರಣಗಳು ಈಗ ಮತ್ತೆ ಆರಂಭವಾಗಿದೆಯೇನೋ ಎಂಬ ಅನುಮಾನಕ್ಕೆ ಕಾರಣವಾಗಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿರುವ ಈ ಕೃತ್ಯ.

ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸುಲಿಗೆಕೋರರ ಈ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸುವಂತಿದೆ.

ಸಿಸಿ ಟಿವಿ ದೃಶ್ಯಾವಳಿಯಂತೆ ಮಹಿಳೆಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಸ್ಕೂಟರ್‌ ನಲ್ಲಿ ಬಂದ ಮೂವರು ಯುವಕರು ಮಚ್ಚು ತೋರಿಸಿ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಅಮೃತಹಳ್ಳಿ ಪೊಲೀಸರು ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...