ಎದೆ ನಡುಗಿಸುವಂತಹ ಅಪಘಾತ ಪ್ರಕರಣ ಒಂದರಲ್ಲಿ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ಟೋಲ್ ಬೂತ್ ಗೆ ಡಿಕ್ಕಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಹೊನ್ನಾವರದಿಂದ ಕುಂದಾಪುರ ಆಸ್ಪತ್ರೆಗೆ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ಶಿರೂರು ಟೋಲ್ ಬೂತ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಅಂಬುಲೆನ್ಸ್ ಬರುತ್ತಿದೆ ಎಂಬ ಕಾರಣಕ್ಕೆ ಅಡ್ಡಲಾಗಿ ಇಟ್ಟಿದ್ದ ಪ್ಲಾಸ್ಟಿಕ್ ತಡೆಯನ್ನು ಸಿಬ್ಬಂದಿ ತೆರವುಗೊಳಿಸಲು ಹೋಗುತ್ತಿದ್ದಾಗಲೇ ಈ ಅಪಘಾತ ಸಂಭವಿಸಿದೆ. ಇದರಿಂದಾಗಿ ಆ ಟೋಲ್ ಸಿಬ್ಬಂದಿ ಅಂಬುಲೆನ್ಸ್ ನಡುವೆ ಸಿಲುಕಿರುವುದು ಸಿಸಿ ಟಿವಿಯಲ್ಲಿ ಕಂಡುಬಂದಿದೆ. ಅಪಘಾತದಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.