ರಾಮನಗರ: ಕಬ್ಬಾಳು ಬೆಟ್ಟದಿಂದ ಜಿಗಿದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕಬ್ಬಾಳು ಬೆಟ್ಟದಲ್ಲಿ ಸೊಂಟಕ್ಕೆ ವೇಲ್ ಕಟ್ಟಿಕೊಂಡು ಪ್ರೇಮಿಗಳು ಬೆಟ್ಟದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
21 ವರ್ಷದ ಚಂದನಾ, ಸತೀಶ್(21) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಇವರು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉರುಗಾನ್ ನಿವಾಸಿಗಳಾಗಿದ್ದಾರೆ. ಸತೀಶ್ ಹೊಸೂರಿನಲ್ಲಿ ಟ್ಯಾಕ್ಸಿ ಚಾಲಕನಾಗಿದ್ದು, ಮೂರು ವರ್ಷಗಳಿಂದ ಇಬ್ಬರೂ ಪ್ರೀತಿಸಿದ್ದರು. ಒಂದು ವರ್ಷದ ಹಿಂದೆ ಕನಕಪುರದ ಯುವಕನೊಂದಿಗೆ ಚಂದನಾ ಮದುವೆ ಮಾಡಲಾಗಿತ್ತು.
ಸೆಪ್ಟೆಂಬರ್ 22 ರಂದು ಗಂಡನ ಮನೆಯಿಂದ ಚಂದನಾ ನಾಪತ್ತೆಯಾಗಿದ್ದು, ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯ ಕಬ್ಬಾಳು ಬೆಟ್ಟದಿಂದ ಜಿಗಿದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.