alex Certify ಬೆರಗಾಗಿಸುತ್ತೆ ‘ಕೆಜಿಎಫ್ – 2’ ಚಿತ್ರದ ಮೊದಲ ದಿನದ ಗಳಿಕೆ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆರಗಾಗಿಸುತ್ತೆ ‘ಕೆಜಿಎಫ್ – 2’ ಚಿತ್ರದ ಮೊದಲ ದಿನದ ಗಳಿಕೆ….!

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಕೆಜಿಎಫ್ – 2 ಚಿತ್ರ ಗುರುವಾರದಂದು ವಿಶ್ವದಾದ್ಯಂತ ತೆರೆಕಂಡಿದೆ. ಭಾರತವೂ ಸೇರಿದಂತೆ 70 ದೇಶಗಳಲ್ಲಿ ಈ ಚಿತ್ರ ತೆರೆಕಂಡಿದ್ದು, ಮೊದಲ ದಿನವೇ ಭರ್ಜರಿ ಗಳಿಕೆ ಮಾಡಿದೆ.

ವಿಶ್ವದಾದ್ಯಂತ ಒಟ್ಟು ಎಂಟು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಕೆಜಿಎಫ್ – 2 ಚಿತ್ರ ತೆರೆಕಂಡಿದ್ದು, ಈ ಪೈಕಿ ಭಾರತದ ಆರು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಮೊದಲ ದಿನವೇ ಬರೋಬ್ಬರಿ 29 ಲಕ್ಷ ಟಿಕೆಟ್ ಗಳನ್ನು ಪ್ರೇಕ್ಷಕರು ಆನ್ಲೈನ್ ಮೂಲಕ ಬುಕ್ ಮಾಡಿದ್ದರು ಎಂದು ತಿಳಿದುಬಂದಿದೆ.

ಕೆಜಿಎಫ್ ಚಾಪ್ಟರ್ 2 ಸಿನಿಮಾ ಮೊದಲ ದಿನ ಒಟ್ಟು 120 ಕೋಟಿ ರೂಪಾಯಿ ಗಳಿಸಿದೆ ಎಂದು ಹೇಳಲಾಗಿದ್ದು, ಅಮೆರಿಕವೊಂದರಲ್ಲೇ ಈ ಚಿತ್ರದ ಮೊದಲ ದಿನದ ಗಳಿಕೆ 7.62 ಕೋಟಿ ರೂಪಾಯಿಗಳೆಂದು ತಿಳಿದುಬಂದಿದೆ.

ಭಾರತೀಯ ಚಿತ್ರರಂಗದಲ್ಲಿ ಕೆಜಿಎಫ್ ಚಾಪ್ಟರ್ 2 ಸಿನಿಮಾ ಹೊಸ ದಾಖಲೆ ಬರೆಯಬಹುದು ಎಂಬ ಮಾತುಗಳು ಕೇಳಿಬರುತ್ತಿದ್ದು, ಇದಕ್ಕೆ ಪೂರಕವೆಂಬಂತೆ ಈ ಚಿತ್ರದ ಪ್ರದರ್ಶನ ಭರ್ಜರಿಯಾಗಿ ಸಾಗಿದೆ.

ರಾಕಿಂಗ್ ಸ್ಟಾರ್ ಯಶ್, ಸಂಜಯ್ ದತ್, ರವೀನಾ ಟಂಡನ್, ಪ್ರಕಾಶ್ ರಾಜ್ ಅಭಿನಯದ ಈ ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ. ವಿಜಯ್ ಕಿರಂಗದೂರು ಅವರು ತಮ್ಮ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...