ಕೇಂದ್ರ ಸರ್ಕಾರ ಇತ್ತೀಚೆಗೆ ಹಾಲಿನ ಉತ್ಪನ್ನಗಳು ಸೇರಿದಂತೆ ಕೆಲವೊಂದು ದೈನಂದಿನ ಬಳಕೆ ವಸ್ತುಗಳ ಮೇಲೆ GST ವಿಧಿಸಿದ್ದು ಇದರಿಂದ ಮೊಸರು, ಮಜ್ಜಿಗೆ ಮೊದಲಾದವು ದುಬಾರಿಯಾಗಿದ್ದವು.
ಬೆಲೆ ಏರಿಕೆಯಿಂದ ಮೊದಲೇ ತತ್ತರಿಸಿರುವ ಜನಸಾಮಾನ್ಯರಿಗೆ ಇದು ಮತ್ತೊಂದು ಹೊರೆಯಾಗಿ ಪರಿಣಮಿಸಿತ್ತು. ಈ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣಗಳು ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು.
ಇದೀಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಶುಭ ಸುದ್ದಿಯೊಂದನ್ನು ನೀಡಿದ್ದು, ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರಿಗೆ ಜನರ ಭಾವನೆ ಅರ್ಥವಾಗುತ್ತದೆ. ಮುಂದಿನ ಜಿ ಎಸ್ ಟಿ ಕೌನ್ಸಿಲ್ ಸಭೆಯಲ್ಲಿ ಪದಾರ್ಥಗಳ ತೆರಿಗೆ ದರ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.