ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ಸೈಕಲ್ ಜಾಥಾ ನಡೆಸಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ನೇತೃತ್ವದಲ್ಲಿ ಟ್ರಿನಿಟಿ ಸರ್ಕಲ್ ನಿಂದ ಬ್ರಿಗೇಡ್ ರೋಡ್ ವರೆಗೆ ಸೈಕಲ್ ಜಾಥಾ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಪೆಟ್ರೋಲ್, ಡಿಸೆಲ್, ಅಡುಗೆ ಅನಿಲ ಬೆಲೆ ಏರಿಕೆಯನ್ನು ಖಂಡಿಸಿದರು.
ʼವಾಟ್ಸಾಪ್ʼ ಪೇಮೆಂಟ್ ಹೊಸ ಬಳಕೆದಾರರಿಗೆ ಸಿಗಲಿದೆ ಈ ಕೊಡುಗೆ
ಈ ವೇಳೆ ಮಾತನಾಡಿದ ಬಿ.ವಿ. ಶ್ರೀನಿವಾಸ್, ಸೂಜಿಯಿಂದ ಹಿಡಿದು ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಗಗನಮುಖಿಯಾಗಿದೆ. ಬೆಲೆ ಏರಿಕೆಗೆ ತಾಲಿಬಾನಿಗಳು ಕಾರಣ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಈ ಸರ್ಕಾರ ಕುಂಭಕರ್ಣ ನಿದ್ದೆಯಲ್ಲಿದೆ. ಬೆಲೆ ಏರಿಕೆ ನಿಯಂತ್ರಿಸದಿದ್ದರೆ ಯುವ ಕಾಂಗ್ರೆಸ್ ನಿಂದ ಇನ್ನೂ ದೊಡ್ಡಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.