alex Certify ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ; ಉತ್ತರ ಕರ್ನಾಟಕ ಜನರ ಸಮಸ್ಯೆಗೆ ಸಿಗುತ್ತಾ ಪರಿಹಾರ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ; ಉತ್ತರ ಕರ್ನಾಟಕ ಜನರ ಸಮಸ್ಯೆಗೆ ಸಿಗುತ್ತಾ ಪರಿಹಾರ…?

ಹುಬ್ಬಳ್ಳಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನ ನಡೆಸಲಾಗುವುದು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸುವರ್ಣ ವಿಧಾನಸೌಧದಲ್ಲೇ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಬಗ್ಗೆ ಸಿಎಂ ಬೊಮ್ಮಾಯಿ ಹಾಗೂ ಸ್ಪೀಕರ್ ಕಾಗೇರಿ ಜೊತೆ ಚರ್ಚೆ ನಡೆಸಿದ್ದೇನೆ ಎಂದರು.

ಡಿಸೆಂಬರ್ 2ನೇ ವಾರದಲ್ಲಿ ಅಧಿವೇಶನ ಆರಂಭವಾಗುವ ಸಾಧ್ಯತೆ ಇದೆ. 2 ವಾರಗಳ ಕಾಲ ಅಧಿವೇಶನ ಬೆಳಗಾವಿಯಲ್ಲೇ ನಡೆಯಲಿದೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸುವ ನಿಟ್ಟಿನಲ್ಲಿ ಬೆಳಗಾವಿ ಅಧಿವೇಶನ ಹೆಚ್ಚು ಕೇಂದ್ರೀಕೃತವಾಗಲಿದೆ. ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ವಿಪಕ್ಷಗಳ ನಾಯಕರ ಜೊತೆಯೂ ಚರ್ಚೆ ನಡೆಸುತ್ತಿದ್ದೇವೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...