alex Certify ಬೆಳಗಾವಿಯಲ್ಲಿ ಮತ್ತೆ ಪುಂಡಾಟ ಮೆರೆದ MES; ಕನ್ನಡಪರ ಸಂಘಟನೆಗಳ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಗಾವಿಯಲ್ಲಿ ಮತ್ತೆ ಪುಂಡಾಟ ಮೆರೆದ MES; ಕನ್ನಡಪರ ಸಂಘಟನೆಗಳ ಆಕ್ರೋಶ

ಬೆಳಗಾವಿ; ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಮತ್ತೆ ಪುಂಡಾಟ ಮೆರೆದಿದ್ದಾರೆ. ಕನ್ನಡ ನಾಮಫಲಕಗಳಿಗೆ ಮಸಿ ಬಳಿದು ಮತ್ತೆ ಉದ್ಧಟತನ ಪ್ರದರ್ಶಿಸಿದ್ದಾರೆ.

ಇತ್ತೀಚೆಗಷ್ಟೇ ರಾಯಣ್ಣ ಪ್ರತಿಮೆ ವಿರೋಪಗೊಳಿಸಿ ದುಷ್ಕೃತ್ಯವೆಸಗಿದ್ದ ಎಂಇಎಸ್ ಪುಂಡರನ್ನು ಬಂಧಿಸಿ, ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದ್ದರೂ ಮತ್ತೆ ಹಳೆ ಕ್ಯಾತೆ ಮುಂದುವರೆಸಿರುವ ಎಂಇಎಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಕನ್ನಡ ನಾಮಫಲಕಗಳಿಗೆ ಮಸಿಬಳಿದಿದ್ದಾರೆ.

ಬೆಳಗಾವಿಯ ಕಂಗ್ರಾಳಿ ಗ್ರಾಮದಲ್ಲಿ ರಸ್ತೆ ಸುರಕ್ಷತೆ ಜಾಗೃತಿ ಮೂಡಿಸುವ ನಾಮಫಲಕಕ್ಕೆ ಮಸಿ ಬಳಿದು ಪುಂಡಾಟ ಮೆರೆದಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...