ಬೆಂಗಳೂರು: ಬೆಸ್ಕಾಂ ಹಾಗೂ ಬಿಬಿಎಂಪಿ ನಿರ್ಲಕ್ಷಕ್ಕೆ ಮತ್ತೋರ್ವ ಬಲಿಯಾಗಿದ್ದು, ಬೆಸ್ಕಾಂ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಸಂಜಯನಗರ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಕಿಶೋರ್ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ವಿದ್ಯುತ್ ಟ್ರಾನ್ಸ್ ಮೀಟರ್ ಸ್ಫೋಟಗೊಂಡು ತಂದೆ – ಮಗಳು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಈ ಅವಘಡ ಸಂಭವಿಸಿದೆ. ಹೊಸಕೋಟೆ ಮೂಲದವನಾದ ಕಿಶೋರ್ ತಂಗಿ ಹಾಗೂ ಭಾವನ ಜತೆ ಗೆದ್ದಲಹಳ್ಳಿಯಲ್ಲಿ ವಾಸವಾಗಿದ್ದ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕಿಶೋರ್ ಮೂರು ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು.
ಕಾರ್ಗತ್ತಲಲ್ಲಿ ಟ್ವೀಟರ್ ಭವಿಷ್ಯ…? ಹೀಗಾಗೋದು ನಿಜವೇ…? ನಡೆದಿದೆ ಹೀಗೊಂದು ಚರ್ಚೆ
ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಕಿಶೋರ್ ಸಾವನ್ನಪ್ಪಿದ್ದಾನೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ