ತಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರು ರಾಜ್ಯ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಂಗಳವಾರದಿಂದ ಅಹೋರಾತ್ರಿ ಪ್ರತಿಭಟನೆ ಆರಂಭಿಸಿದ್ದು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ 3000ಕ್ಕೂ ಅಧಿಕ ಮಂದಿ ಇದರಲ್ಲಿ ಪಾಲ್ಗೊಂಡಿದ್ದಾರೆ.
ಬಿಸಿಯೂಟ ಕಾರ್ಯಕರ್ತೆಯರ ಮುಷ್ಕರದಿಂದಾಗಿ ಶಾಲಾ ಮಕ್ಕಳ ಬಿಸಿಯೂಟ ವಿತರಣೆಯಲ್ಲಿ ವ್ಯತ್ಯಯವಾಗಿದ್ದು, ಬೇಡಿಕೆ ಈಡೇರುವವರೆಗೂ ನಾವುಗಳು ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಇದುವರೆಗೂ ಬಿಸಿಯೂಟ ಕಾರ್ಯಕರ್ತೆಯರಾಗಿ ಸೇವೆ ಸಲ್ಲಿಸಿಕೊಂಡ ಬರುತ್ತಿದ್ದ ಅರವತ್ತು ವರ್ಷ ಮೇಲ್ಪಟ್ಟ ಕಾರ್ಯಕರ್ತೆಯರನ್ನು ಸರ್ಕಾರ ಸೇವೆಯಿಂದ ತೆಗೆದು ಹಾಕಿದ್ದು, ವಜಾಗೊಂಡಿರುವ ಕಾರ್ಯಕರ್ತೆಯರಿಗೂ ಸುಪ್ರೀಂ ಕೋರ್ಟ್ ತೀರ್ಪಿನ ಆಧಾರದ ಮೇರೆಗೆ ಗ್ರಾಚ್ಯುಟಿ ಜಾರಿ ಮಾಡಬೇಕೆಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ.