alex Certify ಬೇಳೂರು ಗೋಪಾಲಕೃಷ್ಣ ಜನ್ಮದಿನದಂದು ರಾಜೇಶ್ ಕೃಷ್ಣನ್ – ಸಾಧುಕೋಕಿಲ ತಂಡದಿಂದ ಸಂಗೀತ ಸಂಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೇಳೂರು ಗೋಪಾಲಕೃಷ್ಣ ಜನ್ಮದಿನದಂದು ರಾಜೇಶ್ ಕೃಷ್ಣನ್ – ಸಾಧುಕೋಕಿಲ ತಂಡದಿಂದ ಸಂಗೀತ ಸಂಜೆ

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಜನ್ಮದಿನದ ಅಂಗವಾಗಿ ಫೆಬ್ರವರಿ 22ರಂದು ಸಾಗರದ ಗಣಪತಿ ಕೆರೆ ಪಕ್ಕದಲ್ಲಿನ ಮಾರಿಕಾಂಬ ದೇವಸ್ಥಾನಕ್ಕೆ ಸೇರಿದ ಕೊಪ್ಪಲಗದ್ದೆ ಆವರಣದಲ್ಲಿ ರಾಜೇಶ್ ಕೃಷ್ಣನ್, ಸಾಧುಕೋಕಿಲ ತಂಡದಿಂದ ಸಂಗೀತ ಸಂಜೆಯನ್ನು ಏರ್ಪಡಿಸಲಾಗಿದೆ.

ಅಂದು ಸಂಜೆ ಆರಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಕುರಿತ ಮಾಹಿತಿಯನ್ನು ಬೇಳೂರು ಅಭಿಮಾನಿ ಬಳಗದ ಸೋಮಶೇಖರ ಲ್ಯಾವಿಗೆರೆ ಶುಕ್ರವಾರದಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅಲ್ಲದೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮೂಲೆಗದ್ದೆ ಮಠದ ಶ್ರೀಗಳು, ಭದ್ರಾವತಿ ಕ್ಷೇತ್ರದ ಶಾಸಕ ಬಿ.ಕೆ. ಸಂಗಮೇಶ್ವರ, ಮಾಜಿ ಶಾಸಕ ಮಧು ಬಂಗಾರಪ್ಪ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ಸೇರಿದಂತೆ ಬಹಳಷ್ಟು ಗಣ್ಯರು ಭಾಗವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...