ಕಾಮಕಸ್ತೂರಿಯನ್ನು ಔಷಧಿಯ ರೂಪದಲ್ಲಿ ಬಳಸುತ್ತಾರೆ ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಇದರ ಸೇವನೆಯಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ?
ಇದು ದೇಹಕ್ಕೆ ತಂಪು ನೀಡುತ್ತದೆ. ಇದನ್ನು ಸುಗಂಧ ಭರಿತ ವಸ್ತುಗಳ ತಯಾರಿಕೆಯಲ್ಲೂ ಬಳಸುತ್ತಾರೆ. ತುಳಸಿಯನ್ನೇ ಹೋಲುವ ಇದನ್ನು ಪ್ರಾಚೀನ ಕಾಲದಿಂದಲೂ ಆಯುರ್ವೇದದಲ್ಲಿ ಔಷಧಿಯಾಗಿ ಬಳಸುತ್ತಿದ್ದಾರೆ.
ಇದರ ಬೀಜದಲ್ಲಿ ಕಬ್ಬಿಣಾಂಶ ಮತ್ತು ನಾರಿನಂಶ ಹೇರಳವಾಗಿದೆ. ಇದರ ಕಷಾಯಕ್ಕೆ ತುಸು ಜೇನುತುಪ್ಪ ಬೆರೆಸಿ ಕುಡಿಯುವುದರಿಂದ ಶೀತ, ಜ್ವರ ಹಾಗೂ ಕೆಮ್ಮಿನ ಲಕ್ಷಣಗಳು ಕಡಿಮೆಯಾಗುತ್ತವೆ.
ಕಾಮಕಸ್ತೂರಿ ಬೀಜವನ್ನು ಒಂದು ಲೋಟ ನೀರಿನಲ್ಲಿ ನೆನೆಹಾಕಿ ಬೆಳಿಗ್ಗೆ ಕುಡಿಯುವುದರಿಂದ ದೇಹ ತಂಪಾಗಿರುತ್ತದೆ. ಇವುಗಳ ಎಲೆಗಳ ರಸವನ್ನು ಬಿಸಿನೀರಿಗೆ ಹಾಕಿ ಸ್ನಾನ ಮಾಡುವುದರಿಂದ ಅಲರ್ಜಿ ಅಥವಾ ದೇಹದ ದುರ್ವಾಸನೆಯಂಥ ಸಮಸ್ಯೆಗಳು ದೂರವಾಗುತ್ತವೆ. ಕಾಮಕಸ್ತೂರಿ ಬೀಜ ನೆನೆಸಿಟ್ಟು ರುಬ್ಬಿ ಅದಕ್ಕೆ ಜೇನುತುಪ್ಪ ಬೆರೆಸಿ ಕುಡಿದರೆ ರಕ್ತ ಬೇಧಿಯಂಥ ಸಮಸ್ಯೆಯೂ ದೂರವಾಗುತ್ತದೆ.