alex Certify ಬೈಕ್ ಗೆ ಡಿಕ್ಕಿ ಹೊಡೆದು ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಗುದ್ದಿದ ಕಾರು; ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಗೆ ಡಿಕ್ಕಿ ಹೊಡೆದು ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಗುದ್ದಿದ ಕಾರು; ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ರಾಯಚೂರು: ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಯರಿಗೆ ಡಿಕ್ಕಿ ಹೊಡೆದಿರುವ ಘಟನೆ ರಾಯಚೂರಿನ ರಾಘವೇಂದ್ರ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಅಪಘಾತದಲ್ಲಿ ಬೈಕ್ ಸವಾರ ಶಿವರಾಜ್ ಪಾಟೀಲ್ ಹಾಗೂ ವಿದ್ಯಾರ್ಥಿನಿಯರಾದ ಜ್ಯೋತಿ, ಶಿವಮಂಗಳ ಗಾಯಗೊಂಡಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್ ನಿಂದ ಬೈಕ್ ಸವಾರ ಬೈಕ್ ತಿರುಗಿಸುತ್ತಿದ್ದ ಈ ವೇಳೆ ರೈಲ್ವೆ ನಿಲ್ದಾಣ ಕಡೆಯಿಂದ ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಯರಿಗೂ ಗುದ್ದಿದೆ.

ಅದೃಷ್ಟವಶಾತ್ ಬೈಕ್ ಸವಾರ ಹಾಗೂ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕಾರನ್ನು ವಶಕ್ಕೆ ಪಡೆದಿರುವ ರಾಯಚೂರು ಸಂಚಾರಿ ವಿಭಾಗದ ಪೊಲೀಸರು ಚಾಲಕನ ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...