
ಹಾಸನ: ಬೈಕ್ ಗೆ ಪೆಟ್ರೋಲ್ ಹಾಕಿಸಿಕೊಂಡ ಹಣ ಕೇಳಿದ್ದಕ್ಕೆ ಡ್ರ್ಯಾಗರ್ ತೋರಿಸಿ ಬೆದರಿಕೆ ಹಾಕಲಾಗಿದೆ. ಇಬ್ಬರೂ ಕಿಡಿಗೇಡಿಗಳು ಹಣ ಕೊಡದೇ ಬಂಕ್ ಸಿಬ್ಬಂದಿ ಬೆದರಿಸಿ ಪರಾರಿಯಾಗಿದ್ದಾರೆ.
ಹಾಸನದ ಬಿಟ್ಟಗೋಡನಹಳ್ಳಿ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡ ಪುಡಿ ರೌಡಿಗಳು ಹಣ ಕೊಡದೆ ಬಂಕ್ ಸಿಬ್ಬಂದಿಯನ್ನು ಬೆದರಿಸಿದ್ದಾರೆ. ಡ್ರ್ಯಾಗರ್ ತೋರಿಸಿ ಬೆದರಿಸಿದ ಪುಡಿ ರೌಡಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪುಡಿ ರೌಡಿಗಳ ಅಟ್ಟಹಾಸ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಾಸನದ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.