ಇತ್ತೀಚಿನ ದಿನಗಳಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಇದಕ್ಕೆ ಹಲವು ಕಾರಣಗಳನ್ನು ನೀಡಲಾಗುತ್ತಿದ್ದು, ಹೀಗೆ ಸಾವನ್ನಪ್ಪಿದವರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಇದೀಗ ಅಂತಹುದೇ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಮಧ್ಯಪ್ರದೇಶದ ಬರ್ವಾನಿಯಲ್ಲಿ ನಡೆದಿರುವ ಈ ಘಟನೆಯಲ್ಲಿ ವ್ಯಕ್ತಿಯೊಬ್ಬರು ಬೈಕಿನಲ್ಲಿ ಹೋಗುವಾಗಲೇ ಹೃದಯಾಘಾತವಾಗಿದೆ. ಇದರ ಪರಿಣಾಮ ಬ್ಯಾಲೆನ್ಸ್ ಕಳೆದುಕೊಂಡ ಅವರು ಪಾರ್ಕ್ ಮಾಡಲಾಗಿದ್ದ ವಾಹನಗಳ ಮೇಲೆ ಬಿದ್ದಿದ್ದಾರೆ.
ಜೂನ್ 17ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಆಘಾತಕಾರಿ ಘಟನೆ ನಡೆದಿದ್ದು, ಬೈಕಿನಲ್ಲಿದ್ದ ವ್ಯಕ್ತಿ ನೆಲಕ್ಕೆ ಬೀಳುತ್ತಿದ್ದಂತೆ ಸಹಾಯಕ್ಕೆ ಧಾವಿಸಿದ ಸುತ್ತಲಿದ್ದವರು ಅವರ ಬಳಿ ಹೋಗಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.