ಪತಿಯನ್ನು ಮರಕ್ಕೆ ಕಟ್ಟಿ ಆತನ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆಯೊಂದು ಮಧ್ಯಪ್ರದೇಶದಲ್ಲಿ ವರದಿಯಾಗಿದೆ. ಪತಿ ಹಾಗೂ ಪತ್ನಿ ಬೈಕ್ ಮೇಲೆ ರಾತ್ರಿ ಸಮಯದಲ್ಲಿ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಮನವಾರ್ ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಪಟ್ಟಣದ ಬ್ರಿಡ್ಜ್ ಹತ್ತಿರ ಬಂದಾಗ ಪಾಪಿಗಳು ಅವರ ಬೈಕ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಆಗ ಪತಿ ಬೈಕ್ ನಿಲ್ಲಿಸುತ್ತಿದ್ದಂತೆ, ಹೊಂಚು ಹಾಕಿದ್ದ ಪಾಪಿಗಳು ಪತಿಯನ್ನು ಕೆಳಗೆ ಬೀಳಿಸಿ, ಆತನನ್ನು ಮರಕ್ಕೆ ಕಟ್ಟಿ, ಮಹಿಳೆಯನ್ನು ಅಪಹರಿಸಿದ್ದಾರೆ.
BIG NEWS: 60 ವರ್ಷ ಮೇಲ್ಪಟ್ಟವರು ಬೂಸ್ಟರ್ ಡೋಸ್ ಪಡೆಯಲು ಬೇಕಿಲ್ಲ ಕೊಮಿರ್ಬಿಡಿಟಿ ದಾಖಲೆ; ಕೇಂದ್ರದಿಂದ ಮಹತ್ವದ ಘೋಷಣೆ
ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ, ಪತಿ ಹಾಗೂ ಮಹಿಳೆಯ ಹತ್ತಿರ ಇದ್ದ ಚಿನ್ನ ಹಾಗೂ ಹಣ ಕಿತ್ತು ಪರಾರಿಯಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಗೋಳಾಡುತ್ತಿದ್ದ ದಂಪತಿಯನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಆಗಮಿಸಿದ ಪೊಲೀಸರು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಘಟನೆ ನಡೆದು ಎರಡು ದಿನಗಳು ಕಳೆದರೂ ಇದುವರೆಗೂ ಆರೋಪಿಗಳು ಪತ್ತೆಯಾಗಿಲ್ಲ. ಸದ್ಯ ಪೊಲೀಸರು ಪಾಪಿಗಳಿಗಾಗಿ ತಂಡ ರಚಿಸಿ ಬಲೆ ಬೀಸಿದ್ದಾರೆ ಎಂದು ವರದಿಯೊಂದು ಹೇಳಿದೆ. ಮಹಿಳೆಯ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.