ಬೈಕ್ ಹಾಗೂ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಅತಿಥಿ ಉಪನ್ಯಾಸಕರೊಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ಬೈಕ್ ಸವಾರ 34 ವರ್ಷದ ಶ್ರೀನಿವಾಸ್ ಮೃತಪಟ್ಟವರಾಗಿದ್ದು, ಇವರು ಸವಳಂಗದಿಂದ ಸ್ವಗ್ರಾಮ ಮಾದಾಪುರಕ್ಕೆ ಹೋಗುತ್ತಿದ್ದ ವೇಳೆ ಶಿಕಾರಿಪುರದಿಂದ ಸವಳಂಗ ಕಡೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ.
ಸವಳಂಗ – ಶಿಕಾರಿಪುರ ಹೆದ್ದಾರಿ ರಸ್ತೆಯ ಸರ್ಕಾರಿ ಆಸ್ಪತ್ರೆ ಬಳಿ ಈ ಅಪಘಾತ ಸಂಭವಿಸಿದ್ದು, ಬಸ್ ಚಕ್ರದ ಅಡಿಗೆ ಸಿಲುಕಿ ಶ್ರೀನಿವಾಸ್ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.