ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಕಂಗೆಟ್ಟಿದ್ದ ಚಿಕ್ಕಮಗಳೂರು ಭಾಗದ ಜನರು ಇದೀಗ ಕಾಡುಕೋಣ ದಾಳಿಗೆ ಬೆಚ್ಚಿ ಬಿದ್ದಿದ್ದಾರೆ. ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮತ್ತಿಕಟ್ಟೆ ರಸ್ತೆಯಲ್ಲಿ ನಡೆದಿದೆ.
ಕಾಡುಕೋಣದ ದಾಳಿಗೆ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಿಲೀಪ್ ಹಾಗೂ ಆಶಾ ಗಾಯಾಳುಗಳು. ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಿಲೀಪ್ ಹಾಗೂ ಆಶಾ ಇಬ್ಬರೂ ಮತ್ತಿಗಟ್ಟೆಯಿಂದ ಕಲ್ಯಾಣಗದ್ದೆಗೆ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ಕಾಡುಕೋಣ ದಾಳಿ ನಡೆಸಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.