ಬ್ಯಾಂಕುಗಳಲ್ಲಿ ಖಾತೆ ಹೊಂದಿರುವವರು ಸಾಮಾನ್ಯವಾಗಿ ಎರಡು ವರ್ಷಗಳಿಗೂ ಅಧಿಕ ಕಾಲ ಯಾವುದೇ ವಹಿವಾಟು ನಡೆಸದಿದ್ದರೆ ಅಂತಹ ಖಾತೆಗಳು ನಿಷ್ಕ್ರಿಯಗೊಳ್ಳುತ್ತವೆ.
ಈ ರೀತಿ ಖಾತೆ ನಿಷ್ಕ್ರಿಯಗೊಂಡ ಸಂದರ್ಭದಲ್ಲಿ ಖಾತೆದಾರರು ಅದರಲ್ಲಿರುವ ಹಣವನ್ನು ಪಡೆದುಕೊಳ್ಳಲು ಮುಂದಾಗುವುದಿಲ್ಲ. ಆದರೆ ಬ್ಯಾಲೆನ್ಸ್ ಹಣವನ್ನು ಬಡ್ಡಿಯೊಂದಿಗೆ ಪಡೆದುಕೊಳ್ಳಬಹುದಾಗಿದ್ದು, ಇದಕ್ಕೆ ನಿಯಮ ಮತ್ತು ಷರತ್ತುಗಳು ಅನ್ವಯಿಸುತ್ತದೆ.
ಹೀಗಾಗಿ ಸಾರ್ವಜನಿಕರು ತಮ್ಮ ಬ್ಯಾಂಕ್ ಖಾತೆಯನ್ನು ಉಪಯೋಗಿಸದಿದ್ದರೆ ಅಂತಹ ಸಂದರ್ಭದಲ್ಲಿ ಅದನ್ನು ಕ್ಲೋಸ್ ಮಾಡುವುದು ಸೂಕ್ತ. ಹೆಚ್ಚಿನ ಮಾಹಿತಿಗಾಗಿ 14440 ನಂಬರ್ ಗೆ ಮಿಸ್ ಕಾಲ್ ಕೊಡಬಹುದಾಗಿದೆ. ಅಥವಾ https://rbikehtahai.rbi.org.in/ud ಗೆ ಭೇಟಿ ನೀಡಬಹುದಾಗಿದೆ.