ಅಯಾನ್ ಮುಖರ್ಜಿ ನಿರ್ದೇಶನದ ಬಹುನಿರೀಕ್ಷಿತ ಬ್ರಹ್ಮಾಸ್ತ್ರ ಸಿನಿಮಾ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ. ಸೆಪ್ಟೆಂಬರ್ 9ರಂದು ಬಿಡುಗಡೆಯಾಗಿದ್ದ ಈ ಚಿತ್ರ ಮೊದಲನೇ ದಿನ 75 ಕೋಟಿ ಕಲೆಕ್ಷನ್ ಮಾಡಿತ್ತು ಇದೀಗ ಕೇವಲ 2ದಿನಗಳಲ್ಲಿ ಒಟ್ಟಾರೆ 160 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಭರ್ಜರಿಯಾಗಿ ಮುನ್ನುಗ್ಗಿತ್ತಿದೆ.
ರಣಬೀರ್ ಕಪೂರ್ ಅಲಿಯಾ ಭಟ್ ಸೇರಿದಂತೆ ಅಮಿತಾಬ್ ಬಚ್ಚನ್, ಮೌನಿ ರಾಯ್, ಸೌರವ್ ಗುಜ್ಜರ್, ಡಿಂಪಲ್ ಕಪಾಡಿಯಾ, ಹಾಗೂ ನಾಗಾರ್ಜುನ ಅಕ್ಕಿನೇನಿ ಈ ಚಿತ್ರದಲ್ಲಿ ತೆರೆ ಹಂಚಿಕೊಂಡಿದ್ದಾರೆ
ಸ್ಟಾರ್ ಸ್ಟುಡಿಯೋಸ್ ಹಾಗೂ ಧರ್ಮಾ ಪ್ರೊಡಕ್ಷನ್ ಬ್ಯಾನರ್ ನಡಿ ಕರಣ್ ಜೋಹರ್, ರಣಬೀರ್ ಕಪೂರ್, ನಮಿತಾ ಮಲೋತ್ರಾ, ಹಾಗೂ ಅಪೂರ್ವ ಮೆಹ್ತಾ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಆ್ಯಕ್ಷನ್ ಕಥಾಹಂದರ ಹೊಂದಿರುವ ಈ ಸಿನಿಮಾವನ್ನು ಸುಮಾರು 400 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.