ಸಮಾರಂಭ ಒಂದರಲ್ಲಿ ಪಾಲ್ಗೊಂಡಿದ್ದ ವೇಳೆ ಮಾತನಾಡುವಾಗ ಬ್ರಾಹ್ಮಣರನ್ನು ಅವಹೇಳನ ಮಾಡಿದ್ದಾರೆ ಎಂಬ ಕಾರಣಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.
ವಕೀಲ ಸುಧೀರ್ ಕುಮಾರ್ ಓಜಾ ಎಂಬವರು ಬಿಹಾರದ ಮುಜಾಫರ್ ಪುರ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದು, ಭಾನುವಾರದಂದು ಮುಂಬೈನಲ್ಲಿ ನಡೆದ ಸಂತ ರವಿ ದಾಸ್ ಜನ್ಮ ದಿನಾಚರಣೆ ಸಂದರ್ಭದಲ್ಲಿ ಮೋಹನ್ ಭಾಗವತ್, ಬ್ರಾಹ್ಮಣರನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಸಮಾರಂಭದಲ್ಲಿ ಭಾಷಣ ಮಾಡುವಾಗ ಮೋಹನ್ ಭಾಗವತ್ ಜಾತಿ ವ್ಯವಸ್ಥೆ ಕುರಿತಂತೆ ಪ್ರಸ್ತಾಪಿಸಿದ್ದು, ಹಿಂದೂ ಸಮಾಜದಲ್ಲಿ ಅಸ್ತಿತ್ವದಲ್ಲಿರುವ ಜಾತಿ ಪದ್ಧತಿ ದೇವರು ಸೃಷ್ಟಿಸಿದ್ದಲ್ಲ. ಇದು ಪುರೋಹಿತ ವರ್ಗದ ಸೃಷ್ಟಿ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದು ಫೆಬ್ರವರಿ 20 ಕ್ಕೆ ವಿಚಾರಣೆ ನಿಗದಿಯಾಗಿದೆ.