ಲಂಡನ್ : ಇಡೀ ಜಗತ್ತಿನ ನಿದ್ದೆಗೆಡಿಸಿರುವ ಕೊರೊನಾ ಓಮಿಕ್ರಾನ್ ಗೆ ಬ್ರಿಟನ್ ತತ್ತರಿಸುತ್ತಿದೆ. ಹೀಗಾಗಿ ಅಲ್ಲಿ ಎರಡು ವಾರಗಳ ನಂತರ ಲಾಕ್ ಡೌನ್ ಘೋಷಣೆ ಮಾಡಲು ನಿರ್ಧರಿಸಲಾಗಿದೆ.
ಅಲ್ಲಿ ಇಲ್ಲಿಯವರೆಗೂ 25 ಸಾವಿರ ಜನರಲ್ಲಿ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, ಕಳೆದ 24 ಗಂಟೆಗಳಲ್ಲಿ 10 ಸಾವಿರ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿನ ವೇಗ ತೀವ್ರವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣಕ್ಕಾಗಿ ಕ್ರಿಸ್ಮಸ್ ನ ಎರಡು ವಾರಗಳ ನಂತರ ಲಾಕ್ ಡೌನ್ ಹೇರಬೇಕೆಂದು ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.
ಈ ಕುರಿತು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಮುಂದೆ ಅಲ್ಲಿನ ಕೋವಿಡ್ ತಡೆಗೆ ವೈಜ್ಞಾನಿಕ ಸಲಹಾ ಗುಂಪು ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ.
ಸ್ವರ್ಣ ಮಂದಿರದ ಪ್ರಾಂಗಣ ಅಪವಿತ್ರಗೊಳಿಸಲು ಮುಂದಾದ ಯುವಕನ ಹತ್ಯೆ
ಈಗಾಗಲೇ ಲಂಡನ್ ನಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಕೂಡ ಈ ಕುರಿತು ಕಳವಳ ವ್ಯಕ್ತಪಡಿಸುತ್ತಿದೆ. 1.5 ರಿಂದ 3 ದಿನಗಳಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ದುಪ್ಪಟ್ಟಾಗುತ್ತಿದೆ ಎಂದು ಹೇಳಿದೆ. ಸ್ಕಾಟ್ಲೆಂಡ್, ಐರ್ಲೆಂಡ್, ನೆದರ್ಲ್ಯಾಂಡ್, ಫ್ರಾನ್ಸ್ ನಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಈಗಾಗಲೇ ನೆದರ್ಲ್ಯಾಂಡ್ ನಲ್ಲಿ ಲಾಕ್ ಡೌನ್ ಹೇರಲಾಗಿದೆ.