ಬ್ರಿಟನ್ ನಲ್ಲಿ ಸೋಂಕಿತರ ಸಂಖ್ಯೆ ವಿಪರೀತವಾಗಿ ಹೆಚ್ಚಳವಾಗುತ್ತಿದ್ದು, ವೈದ್ಯಕೀಯ ಸಿಬ್ಬಂದಿ ಕೊರತೆ ಎದುರಾಗಿದೆ. ಹೀಗಾಗಿ ಜನರನ್ನು ರಕ್ಷಿಸಲು ಬ್ರಿಟಿಷ್ ಸೇನಾಧಿಕಾರಿಗಳನ್ನು ನಿಯೋಜಿಸಲಾಗಿದೆ.
ಅಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ವಿಪರೀತವಾಗಿ ಹೆಚ್ಚಳವಾಗುತ್ತಿದ್ದು, ಕಳೆದ ಒಂದು ವಾರದಲ್ಲಿ ಸೋಂಕಿತರ ಸಂಖ್ಯೆ ಬರೋಬ್ಬರಿ 12,72,131 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಅಲ್ಲದೇ, ಕಳೆದ 24 ಗಂಟೆಗಳಲ್ಲಿ 1,79,756 ಜನರಲ್ಲಿ ಸೋಂಕು ಕಾಣಿಸಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.
ಹೀಗಾಗಿ ವೈದ್ಯಕೀಯ ಸಿಬ್ಬಂದಿಯ ಕೊರತೆಯಾಗಿದೆ. ಈ ನಿಟ್ಟಿನಲ್ಲಿ ಪರಿಸ್ಥಿತಿ ಹದಗೆಡಬಾರದೆಂಬ ಕಾರಣದಿಂದ ಸೇನಾಧಿಕಾರಿಗಳನ್ನು ನೇಮಿಸಲಾಗಿದೆ. ಈ ಅಧಿಕಾರಿಗಳು ಜನರನ್ನು ನಿಯಂತ್ರಿಸುವುದರೊಂದಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ಸಹಾಯ ಮಾಡುವಂತೆ ಸೂಚಿಸಲಾಗಿದೆ.
ಈಗಾಗಲೇ 200 ಜನ ಸೇನಾಧಿಕಾರಿಗಳನ್ನು 40 ತಂಡ ಗಳನ್ನಾಗಿ ಮಾಡಿ ಕೆಲಸ ಮಾಡಲು ಸೂಚಿಸಲಾಗಿದೆ. ಒಂದು ತಂಡದಲ್ಲಿ 5 ಜನ ಇರಲಿದ್ದಾರೆ. ಇವರು ವೈದ್ಯಕೀಯ ಸಿಬ್ಬಂದಿಗೆ ಸಹಾಯ ಮಾಡುತ್ತ, ರೋಗಿಗಳನ್ನು ನಿಯಂತ್ರಿಸಲಿದ್ದಾರೆ.
ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಅವರು, ಮಹಾಮಾರಿ ತಡೆಗಟ್ಟುವ ನಿಟ್ಟಿನಲ್ಲಿ ಮತ್ತಷ್ಟು ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುವುದಾಗಿ ಹೇಳಿದ್ದಾರೆ.