
ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ದೇಶ – ವಿದೇಶಗಳಿಂದ ಭಕ್ತರು ಆಗಮಿಸುತ್ತಾರೆ. ರಸ್ತೆ ಹಾಗೂ ರೈಲು ಮಾರ್ಗ ಇದ್ದರೂ ಸಹ ವಿಮಾನ ನಿಲ್ದಾಣದ ಸೌಲಭ್ಯ ಇರಲಿಲ್ಲ. ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಆರಂಭವಾಗಿತ್ತಾದರೂ ನಿಧಾನಗತಿಯಲ್ಲಿ ಸಾಗಿದೆ.
ರಾಜ್ಯ ರಾಜಕೀಯ ಅನಿಶ್ಚಿತತೆ ಸೇರಿದಂತೆ ಹಲವು ಕಾರಣಗಳಿಂದ ಕಳೆದ ಮೂರು ವರ್ಷಗಳಿಂದಲೂ ರಾಯಚೂರು ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಮಂದಗತಿಯಲ್ಲಿ ಸಾಗಿತ್ತು. ಇದು ಕಲ್ಯಾಣ ಕರ್ನಾಟಕ ಭಾಗದ ಜನತೆಯ ಆಕ್ರೋಶಕ್ಕೆ ಕಾರಣವಾಗಿತ್ತು.
BIG NEWS: ಪಠ್ಯ ಕಡಿತ ಕುರಿತಂತೆ ಶಿಕ್ಷಣ ಸಚಿವರ ಮಹತ್ವದ ಹೇಳಿಕೆ
ಇದೀಗ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠವೇ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಕುರಿತಂತೆ ಮಹತ್ವದ ಹೆಜ್ಜೆಯಿಟ್ಟಿದೆ. ಮಂತ್ರಾಲಯ ಮಠವು ತನ್ನ ಅಧೀನದ ಭೂಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಆರಂಭಿಸಲಿದೆ ಎಂದು ಹೇಳಲಾಗಿದೆ.
ಈ ಕುರಿತಂತೆ ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮಾಹಿತಿ ನೀಡಿದ್ದು, ದೇಶ – ವಿದೇಶದ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದ ಸೂಕ್ತ ಸ್ಥಳದಲ್ಲಿ ಶ್ರೀಮಠದ ವತಿಯಿಂದ ವಿಮಾನ ನಿಲ್ದಾಣ ಕಾರ್ಯ ಆರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ.