ಕೊರೊನಾ ಲಾಕ್ಡೌನ್ ಕಾರಣಕ್ಕೆ ಕಳೆದ 50 ದಿನಗಳಿಗೂ ಅಧಿಕ ಕಾಲದಿಂದ ಬಹುತೇಕ ಎಲ್ಲ ಚಟುವಟಿಕೆಗಳಿಗೂ ತೆರೆಬಿದ್ದಿದ್ದು, ಇದೀಗ ಹಂತಹಂತವಾಗಿ ಅನ್ಲಾಕ್ ಪ್ರಕ್ರಿಯೆ ಆರಂಭವಾಗಿರುವುದರಿಂದ ಒಂದೊಂದೇ ಚಟುವಟಿಕೆಗಳು ಶುರುವಾಗಿವೆ.
ಆದರೂ ಕೂಡ ಕೆಲವೊಂದು ನಿರ್ಬಂಧಗಳನ್ನು ವಿಧಿಸಲಾಗಿದ್ದು, ಹೆಚ್ಚು ಜನರು ಸೇರುವ ಮಾಲ್, ಚಿತ್ರಮಂದಿರ, ಪ್ರಾರ್ಥನಾ ಮಂದಿರಗಳನ್ನು ತೆರೆಯಲು ಅವಕಾಶ ನೀಡಲಾಗಿಲ್ಲ. ಜೊತೆಗೆ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಸಹ ಜಾರಿಯಲ್ಲಿದೆ.
ಇದೀಗ ಮೂರನೇ ಹಂತದ ಅನ್ಲಾಕ್ ಪ್ರಕ್ರಿಯೆಗೆ ಸರ್ಕಾರ ಸಿದ್ಧತೆ ನಡೆಸಿದ್ದು, ಭಕ್ತಾದಿಗಳಿಗೆ ಸಿಹಿಸುದ್ದಿ ಸಿಗುವ ನಿರೀಕ್ಷೆಯಿದೆ. ಈ ಕುರಿತು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದು, ದೇವಸ್ಥಾನಗಳಿಗೆ ಭಕ್ತರ ಪ್ರವೇಶ ನಿರ್ಬಂಧ ಸಡಿಲಿಸುವ ಕುರಿತಂತೆ ಜುಲೈ 5ರೊಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.