alex Certify ಭಕ್ತಾದಿಗಳೇ ಗಮನಿಸಿ: ಇಂದಿನಿಂದ ʼಹಾಸನಾಂಬೆʼ ದರ್ಶನ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಕ್ತಾದಿಗಳೇ ಗಮನಿಸಿ: ಇಂದಿನಿಂದ ʼಹಾಸನಾಂಬೆʼ ದರ್ಶನ ಆರಂಭ

ವರ್ಷಕ್ಕೆ ಒಮ್ಮೆ ತೆರೆಯುವ ಹಾಸನಾಂಬೆ ದೇವಾಲಯದ ಬಾಗಿಲು ಇಂದಿನಿಂದ ಅಂದರೆ ಅಕ್ಟೋಬರ್ 13 ರಂದು ತೆರೆಯಲಿದೆ. ಒಟ್ಟು ಹದಿನೈದು ದಿನಗಳ ಕಾಲ ದೇಗುಲ ತೆರೆದಿರಲಿದ್ದು, ಇದರ ವೀಕ್ಷಣೆಗಾಗಿ ಹಾಸನಕ್ಕೆ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಾರೆ.

ಅಶ್ವೀಜ ಮಾಸದ ಶುಕ್ಲ ಪಕ್ಷದ ಮೊದಲ ಗುರುವಾರದಂದು ದೇಗುಲದ ಬಾಗಿಲು ಭಕ್ತರಿಗಾಗಿ ತೆರೆಯಲಿದ್ದು, ಬಲಿಪಾಡ್ಯಮಿಯ ಮಾರನೇ ದಿನ ವಿಧಿ ವಿಧಾನಗಳೊಂದಿಗೆ ಶಾಸ್ತ್ರೋಕ್ತವಾಗಿ ಮುಚ್ಚಲಾಗುತ್ತದೆ.

ಅಕ್ಟೋಬರ್ 13 ರಿಂದ ಅಕ್ಟೋಬರ್ 27 ರವರೆಗೆ ದೇಗುಲದ ಬಾಗಿಲು ತೆರೆದಿರಲಾಗಿತ್ತಾದರೂ ಅಕ್ಟೋಬರ್ 25ರಂದು ಸೂರ್ಯ ಗ್ರಹಣ ಹಾಗೂ ಅಕ್ಟೋಬರ್ 27ರ ಕೊನೆಯ ದಿನದಂದು ಸಾರ್ವಜನಿಕರಿಗೆ ದೇಗುಲ ಪ್ರವೇಶ ಇರುವುದಿಲ್ಲ. ಹೀಗಾಗಿ ಈ ಬಾರಿ 12 ದಿನಗಳ ಕಾಲ ಭಕ್ತರು ಹಾಸನಾಂಬೆಯ ದರ್ಶನ ಪಡೆಯಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...