ಏಪ್ರಿಲ್ 4ರ ಇಂದು ಶ್ರೀ ಭಗವಾನ್ ಮಹಾವೀರ ಜಯಂತಿ ಆಚರಣೆ ಮಾಡಲಾಗುತ್ತಿದ್ದು, ಇದರ ಅಂಗವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
ಹೀಗಾಗಿ ಮಾಲೀಕರು ಇಂದು ತಮ್ಮ ಉದ್ದಿಮೆಯನ್ನು ಬಂದ್ ಮಾಡಬೇಕು ಎಂದು ಪಾಲಿಕೆ ಆಯುಕ್ತ ಕೆ. ಮಾಯಣ್ಣ ಗೌಡ ತಿಳಿಸಿದ್ದು, ಒಂದೊಮ್ಮೆ ಆದೇಶ ಉಲ್ಲಂಘಿಸಿದರೆ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.