ಪ್ರಧಾನಿ ಮೋದಿ ರಸ್ತೆ ಮಾರ್ಗದಲ್ಲಿ ಪ್ರಯಾಣದ ವೇಳೆಯಲ್ಲಿ ಉಂಟಾದ ಭದ್ರತಾ ಲೋಪವು ಜಾಗತಿಕ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. ಪ್ರಧಾನಿ ಮೋದಿಯವರ ರಸ್ತೆ ಪ್ರಯಾಣ ಬಗ್ಗೆ ಪಂಜಾಬ್ ಪೊಲೀಸರಿಗೆ ಮೊದಲೇ ಮಾಹಿತಿ ನೀಡಲಾಗಿತ್ತು.
ಪಂಜಾಬ್ ರಾಜ್ಯ ಪೊಲೀಸ್ ಮುಖ್ಯಸ್ಥರಿಂದ ಭದ್ರತೆ ಬಗ್ಗೆ ಮಾಹಿತಿ ಪಡೆದ ನಂತರವೇ ಪ್ರಧಾನಿ ಮೋದಿ ಬೆಂಗಾವಲು ಪಡೆಯು ರಸ್ತೆ ಮಾರ್ಗದಲ್ಲಿ ಹೊರಟಿತ್ತು ಎಂದು ಪಂಜಾಬ್ನಲ್ಲಿ ಭದ್ರತಾ ಲೋಪ ನಡೆದ 1 ದಿನಗಳ ಬಳಿಕ ಸರ್ಕಾರಿ ಮೂಲಗಳು ಮಾಹಿತಿ ನೀಡಿವೆ.
ನಿನ್ನೆ ಫಿರೋಜ್ಪುರದಲ್ಲಿ ರಾಜಕೀಯ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ಮೋದಿ ತೆರಳುತ್ತಿದ್ದ ವೇಳೆಯಲ್ಲಿ ಪಂಜಾಬ್ನ ಬಟಿಂಡಾದಲ್ಲಿ ಅವರು ಸುಮಾರು 20 ನಿಮಿಷಗಳ ಕಾಲ ರೈತರಿಂದ ರಸ್ತೆ ತಡೆ ಅನುಭವಿಸಿದರು.
ಫ್ಲೈ ಓವರ್ನಲ್ಲಿ 20 ನಿಮಿಷಗಳ ಕಾಲ ಪ್ರತಿಭಟನಾಕಾರರು ಪ್ರಧಾನಿ ಮೋದಿ ವಾಹನ ಸಂಚಾರಕ್ಕೆ ಅಡಚಣೆಯುಂಟು ಮಾಡಿದರು. ಈ ಸಂಬಂಧ ಸಾಕಷ್ಟು ಫೋಟೋಗಳು ಈಗಾಗಲೇ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಕೊನೆಗೆ ರ್ಯಾಲಿಗಳನ್ನು ರದ್ದು ಮಾಡಿದ ಪ್ರಧಾನಿ ಮೋದಿ ಪಂಜಾಬ್ನಿಂದ ಹಿಂದಿರುಗಿದ್ದಾರೆ.
ಪಂಜಾಬ್ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಆಡಳಿತ ವೈಫಲ್ಯದ ಬಗ್ಗೆ ಬಿಜೆಪಿ ಕಿಡಿಕಾರಿದೆ. ಹಾಗೂ ಪಂಜಾಬ್ನ ಗೃಹ ಸಚಿವ ಸುಖಜಿಂದರ್ ಸಿಂಗ್ ರಾಂಧವಾ ಹಾಗೂ ಪಂಜಾಬ್ ಪೊಲೀಸ್ ಮುಖ್ಯಸ್ಥರನ್ನು ವಜಾಗೊಳಿಸಬೇಕು ಎಂಬ ಕೂಗು ಕೇಳಿ ಬರ್ತಿದೆ.