
ಬುಧವಾರದಂದು ಪ್ರಧಾನಿ ಮೋದಿಯವರ ಪಂಜಾಬ್ ಪ್ರವಾಸದ ವೇಳೆಯಲ್ಲಿ ಫಿರೋಜ್ಪುರ – ಮೊಗಾ ರಾಷ್ಟ್ರೀಯ ಹೆದ್ದಾರಿಯನ್ನು ತಡೆದ ಭದ್ರತಾ ಲೋಪಕ್ಕೆ ಕಾರಣವಾಗಿದ್ದ ಅಪರಿಚಿತ ವ್ಯಕ್ತಿಗಳ ವಿರುದ್ಧ ಫಿರೋಜ್ಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಈ ವಿಚಾರವಾಗಿ ಮಾತನಾಡಿದ ಕುಲ್ಗರ್ಹಿ ಸ್ಟೇಷನ್ ಹೌಸ್ ಆಫೀಸರ್ ಬೀರಬಲ್ ಸಿಂಗ್, ಭದ್ರತಾ ಲೋಪ ಪ್ರಕರಣ ಸಂಬಂಧ 100ಕ್ಕೂ ಅಧಿಕ ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಎಂದು ಹೇಳಿದ್ದಾರೆ. ಇದನ್ನು ಹೊರತುಪಡಿಸಿ ಪ್ರಕರಣ ಸಂಬಂಧ ಇನ್ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಲು ಬೀರಬಲ್ ಸಿಂಗ್ ನಿರಾಕರಿಸಿದ್ದಾರೆ.
ಇದೊಂದು ಸೂಕ್ಷ್ಮ ಪ್ರಕರಣವಾಗಿದ್ದು ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸದಂತೆ ಇಲಾಖೆಯಿಂದ ಸೂಚನೆಯನ್ನು ಸ್ವೀಕರಿಸಿದ್ದೇವೆ. ಭದ್ರತಾ ಲೋಪ ಪ್ರಕರಣದ ಅಡಿಯಲ್ಲಿ ತನಿಖೆ ನಡೆಯುತ್ತಿದೆ. ಆದರೆ ಇಲ್ಲಿಯವರೆಗೆ ಯಾವುದೇ ವ್ಯಕ್ತಿಯನ್ನು ನಾವು ಬಂಧಿಸಿಲ್ಲ ಎಂದು ಹೇಳಿದರು.
ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರೂ ಸಹ ಬುಧವಾರ ಸಂಜೆ ಭಾರತಿ ಕಿಸಾನ್ ಯೂನಿಯನ್ ಕ್ರಾಂತಿಕಾತಿ ಕಾರ್ಯಕರ್ತರು ಪ್ರಧಾನಿ ಮೋದಿ ಬೆಂಗಾವಲು ಪಡೆಯ ಸಂಚಾರವನ್ನು ಸ್ಥಗಿತಗೊಳಿಸಿದ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ.
ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರೂ, ಬುಧವಾರ ಸಂಜೆ ಭಾರತಿ ಕಿಸಾನ್ ಯೂನಿಯನ್ (ಕ್ರಾಂತಿಕಾರಿ) ಕಾರ್ಯಕರ್ತರು ಪ್ರಧಾನಿ ಬೆಂಗಾವಲು ಪಡೆ ಸಂಚಾರವನ್ನು ಸ್ಥಗಿತಗೊಳಿಸಿದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.