ಭದ್ರಾ ಜಲಾಶಯದ ಬಲದಂಡೆ ಹಾಗೂ ಎಡದಂಡೆ ನಾಲೆ ವ್ಯಾಪ್ತಿಯ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಜಲಾಶಯದಿಂದ ಜುಲೈ 13ರ ಬುಧವಾರ ಮಧ್ಯರಾತ್ರಿಯಿಂದ ನೀರು ಹರಿಸಲಾಗುತ್ತದೆ ಎಂದು ತಿಳಿದುಬಂದಿದೆ.
ಈ ಮೊದಲು ಜುಲೈ 10 ರ ಮಧ್ಯರಾತ್ರಿಯಿಂದ ನಾಲೆಗೆ ನೀರು ಹರಿಸಲು ನಿರ್ಧರಿಸಲಾಗಿತ್ತಾದರೂ ತಾಂತ್ರಿಕ ಕಾರಣದಿಂದಾಗಿ ಇದು ಸಾಧ್ಯವಾಗಿರಲಿಲ್ಲ. ಇದೀಗ ಜುಲೈ 13 ರಿಂದ ನೀರು ಹರಿಸಲು ತೀರ್ಮಾನಿಸಲಾಗಿದೆ.
ಪ್ರಸ್ತುತ ಭದ್ರಾ ಜಲಾಶಯದ ನೀರಿನ ಮಟ್ಟ ಸೋಮವಾರದ ವೇಳೆಗೆ 174.6 ಅಡಿಗೆ ಏರಿಕೆಯಾಗಿದ್ದು ಜಲಾಶಯದ ಗರಿಷ್ಠ ಮಟ್ಟ 186 ಅಡಿ ತಲುಪಲು ಇನ್ನೂ 12 ಅಡಿಯಷ್ಟು ಬಾಕಿ ಇದೆ. ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ ಆಗುತ್ತಿರುವ ಕಾರಣ ಶೀಘ್ರದಲ್ಲೇ ಭರ್ತಿಯಾಗಬಹುದು ಎಂದು ಹೇಳಲಾಗಿದೆ.