alex Certify ಭದ್ರಾ ಡ್ಯಾಂ ನಿಂದ ನದಿಗೆ ನೀರು; ನದಿ ಪಾತ್ರದಲ್ಲಿ ತಿರುಗಾಟಕ್ಕೆ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭದ್ರಾ ಡ್ಯಾಂ ನಿಂದ ನದಿಗೆ ನೀರು; ನದಿ ಪಾತ್ರದಲ್ಲಿ ತಿರುಗಾಟಕ್ಕೆ ನಿಷೇಧ

ಬೇಸಿಗೆ ಸಂದರ್ಭದಲ್ಲಿ ಹಾವೇರಿ ಜಿಲ್ಲೆ ರಾಣೆಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣ ಜೊತೆಗೆ ನದಿ ಅಕ್ಕಪಕ್ಕದಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿಗೆ ಅನುಕೂಲವಾಗುವಂತೆ ಶಿವಮೊಗ್ಗ ಜಿಲ್ಲೆಯ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಹರಿಸಲು ಆದೇಶಿಸಲಾಗಿದೆ.

ಒಂದು ಟಿಎಂಸಿ ನೀರನ್ನು ಏಪ್ರಿಲ್ 27ರ ಸಂಜೆ 6 ಗಂಟೆಯಿಂದ ಮೇ 9 ರ ಬೆಳಗ್ಗೆ 6 ಗಂಟೆವರೆಗೆ ಪ್ರತಿ ದಿನ ಸಾವಿರ ಕ್ಯೂಸೆಕ್ ನಂತೆ ಒಟ್ಟು 11,574 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತದೆ.

ಈ ಅವಧಿಯಲ್ಲಿ ಸಾರ್ವಜನಿಕರು, ರೈತರು ನದಿ ಪಾತ್ರದಲ್ಲಿ ತಿರುಗಾಡುವುದು, ತೋಟಗಾರಿಕೆಗೆ ಸಂಬಂಧಿಸಿದ ಕೆಲಸ ಮಾಡುವುದನ್ನು ನಿಷೇಧಿಸಲಾಗಿದ್ದು, ಜೊತೆಗೆ ನದಿ ದಂಡೆಯಲ್ಲಿ ಪಂಪ್ಸೆಟ್ ಅಳವಡಿಸುವುದನ್ನು ಸಹ ನಿರ್ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...