ರಾಜ್ಯಕ್ಕೆ ಮುಂಗಾರು ಕಾಲಿಟ್ಟು ಈಗಾಗಲೇ ಬಹಳಷ್ಟು ದಿನಗಳು ಕಳೆದಿದ್ದರೂ ಸಹ ವ್ಯಾಪಕವಾದ ಮಳೆಯಾಗುತ್ತಿಲ್ಲ. ಹೀಗಾಗಿ ಜಲಾಶಯಗಳು ನೀರಿನ ಕೊರತೆ ಎದುರಿಸುತ್ತಿವೆ. ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆ ಕುಂಠಿತಗೊಂಡಿರುವುದು ಆತಂಕ ಮೂಡಿಸಿದೆ.
ಇದರ ಮಧ್ಯೆ ಬುಧವಾರದಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗದಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಭದ್ರಾ ಅಚ್ಚುಕಟ್ಟು ಪ್ರದೇಶದ ಮುಂಗಾರು ಹಂಗಾಮು ಬೆಳೆಗೆ ಪೂರಕವಾಗುವಂತೆ ಎಡ ಮತ್ತು ಬಲದಂಡೆ ನಾಲೆಗಳಿಗೆ ಜುಲೈ 15ರಿಂದ ನೀರು ಹರಿಸಲು ತೀರ್ಮಾನಿಸಲಾಗಿದೆ. ಪ್ರಸ್ತುತ ಜಲಾಶಯದಲ್ಲಿ ನೀರಿನ ಮಟ್ಟ 151.8 ಅಡಿ ಇದ್ದು, ಮುಂದಿನ ದಿನಗಳಲ್ಲಿ ಮಳೆ ವ್ಯಾಪಕವಾಗಿ 165 ಅಡಿಗೆ ಏರಿಕೆಯಾಗಬಹುದು ಎಂಬ ನಿರೀಕ್ಷೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.