ಭದ್ರಾ ನಾಲೆ ವ್ಯಾಪ್ತಿಯ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನವೆಂಬರ್ 25 ರಂದು ಭದ್ರಾ ಜಲಾಶಯದ ಬಲ ಮತ್ತು ಎಡದಂಡೆ ನಾಲೆ, ಆನವೇರಿ ಶಾಖಾ ನಾಲೆ, ದಾವಣಗೆರೆ, ಮಲೆಬೆನ್ನೂರು ಶಾಖಾ ನಾಲೆ ಮತ್ತು ಹರಿಹರ ಶಾಖಾ ನಾಲೆಗಳಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಲಾಗುತ್ತಿದೆ.
ನವೆಂಬರ್ 16ರಂದು ನಡೆದ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಸಭೆಯಲ್ಲಿ ಈ ಕುರಿತಂತೆ ತೀರ್ಮಾನ ಕೈಗೊಳ್ಳಲಾಗಿದ್ದು, 2022 – 23ನೇ ಮುಂಗಾರು ಹಂಗಾಮಿನ ಬೆಳೆಗಳಿಗೆ ಹರಿಸಲಾಗುತ್ತಿರುವ ನೀರನ್ನು ನವೆಂಬರ್ 25 ರಂದು ನಿಲ್ಲಿಸಲು ನಿರ್ಧರಿಸಲಾಗಿತ್ತು.
ಅದರಂತೆ ನವೆಂಬರ್ 25 ರಂದು ನೀರು ನಿಲ್ಲಿಸಲಾಗುತ್ತಿದ್ದು, ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬರುವ ಎಲ್ಲ ರೈತರು, ಇಲಾಖೆಯೊಂದಿಗೆ ಸಹಕರಿಸುವಂತೆ ನೀರಾವರಿ ನಿಗಮ ಪತ್ರಿಕಾ ಪ್ರಕಟಣೆಯ ಮೂಲಕ ಕೋರಿದೆ.