
ಲೋಕೇಶ್ ಕನಗರಾಜ್ ನಿರ್ದೇಶನದ ಕಮಲಹಾಸನ್ ನಟನೆಯ ಸೂಪರ್ ಡೂಪರ್ ಹಿಟ್ ‘ವಿಕ್ರಂ’ ಚಿತ್ರ ಜೂನ್ 3ರಂದು ತರೆಕಂಡು ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿತ್ತು.
ಸುಮಾರು 500 ಕೋಟಿ ಕಲೆಕ್ಷನ್ ಮಾಡುವ ಮೂಲಕ ಹೊಸ ದಾಖಲೆ ಬರೆಯಿತು. ಈ ಸಿನಿಮಾ ಇದೀಗ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಸಂಜೆ 6ಗಂಟೆಗೆ ಪ್ರಸಾರವಾಗಲಿದೆ. ಈ ಕುರಿತು ಸ್ಟಾರ್ ಸುವರ್ಣ ವಾಹಿನಿ ತನ್ನ ಅಧಿಕೃತ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದೆ.
ರಾಜ್ ಕಮಲ್ ಫಿಲ್ಮ್ಸ್ ಬ್ಯಾನರ್ ನಡಿ ಕಮಲ್ ಹಾಸನ್ ಹಾಗೂ ಆರ್. ಮಹೇಂದ್ರ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಆ್ಯಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿದ್ದ ಈ ಸಿನಿಮಾದಲ್ಲಿ ಕಮಲ್ ಹಾಸನ್ ಸೇರಿದಂತೆ ಫಹಾದ್ ಫಾಸಿಲ್, ವಿಜಯ್ ಸೇತುಪತಿ, ಸಂತನ ಭಾರತಿ, ಶಿವಾನಿ, ಗಾಯಿತ್ರಿ, ಹರೀಶ್ ಪೆರಾಡಿ, ಗೌತಮ್ ಸುಂದರರಾಜನ್ ಸೇರಿದಂತೆ ಮೊದಲಾದ ಕಲಾವಿದರು ಅಭಿನಯಿಸಿದ್ದಾರೆ.
