ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಾರತ ಸರ್ಕಾರದ ಕಾರ್ಯ ವೈಖರಿಗಳನ್ನು ಹಾಡಿ ಹೊಗಳಿದ್ದಾರೆ. ಭಾರತದ ವಿದೇಶಾಂಗ ನೀತಿಯು ಸ್ವತಂತ್ರವಾಗಿದೆ ಹಾಗೂ ಇದು ಎಂದಿಗೂ ಜನರ ಒಳಿತಿಗಾಗಿ ಶ್ರಮಿಸುತ್ತದೆ ಎಂದು ಹೇಳಿದ್ದಾರೆ.
ವಿಡಿಯೋವೊಂದರಲ್ಲಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್, ಇಂದು ನಾನು ಹಿಂದೂಸ್ತಾನಕ್ಕೆ ನಮಸ್ಕರಿಸುತ್ತೇನೆ. ಹಿಂದೂಸ್ತಾನವು ಎಂದಿಗೂ ತನ್ನ ಸ್ವತಂತ್ರ ವಿದೇಶಾಂಗ ನೀತಿಯನ್ನು ಉಳಿಸಿಕೊಂಡಿದೆ ಎಂದು ಹೇಳಿದ್ದಾರೆ.
ಭಾರತವು ಕ್ವಾಡ್ ಮೈತ್ರಿಕೂಟದ ಸದಸ್ಯ ರಾಷ್ಟ್ರವಾಗಿದ್ದು ಅಮೆರಿಕ ಕೂಡ ಇದರಲ್ಲಿ ಒಂದು ಸದಸ್ಯ ರಾಷ್ಟ್ರವಾಗಿದೆ. ಆದರೆ ಭಾರತವು ಇಂದಿಗೂ ತನ್ನನ್ನು ತಟಸ್ಥ ಎಂದೇ ಹೇಳಿದೆ. ನಿರ್ಬಂಧವನ್ನು ಎದುರಿಸುತ್ತಿರುವ ರಷ್ಯಾದಿಂದ ಭಾರತವು ತೈಲಗಳನ್ನು ಆಮದು ಮಾಡಿಕೊಂಡಿದೆ. ಏಕೆಂದರೆ ಭಾರತದ ವಿದೇಶಾಂಗ ನೀತಿಯು ಜನರ ಪರವಾಗಿದೆ ಎಂದು ಇಮ್ರಾನ್ ಖಾನ್ ಹೇಳಿದರು.
ಖೈಬರ್-ಪಖ್ತುಂಖ್ವಾ ಪ್ರಾಂತ್ಯದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಇಮ್ರಾನ್ ಖಾನ್ ತಮ್ಮ ಬೆಂಬಲಿಗರಿಗೆ ತಮ್ಮ ವಿದೇಶಾಂಗ ನೀತಿಯು ಪಾಕಿಸ್ತಾನದ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.