alex Certify ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ಕನ್ನಡಿಗ ಲೆಫ್ಟಿನೆಂಟ್ ಜನರಲ್ ರಾಜು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ಕನ್ನಡಿಗ ಲೆಫ್ಟಿನೆಂಟ್ ಜನರಲ್ ರಾಜು

ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ಕರ್ನಾಟಕ ಮೂಲದ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ್ ರಾಜು ಅವರನ್ನು ನೇಮಿಸಲಾಗಿದ್ದು, ಮೇ1ರಂದು ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ಮೂಲದ ಸೋಮಶೇಖರ್ ರಾಜು ಅವರು 38 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿದ್ದು, ಇವರು ಬಿಜಾಪುರ ಸೈನಿಕ ಶಾಲೆ ಹಾಗೂ ಪುಣೆಯ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ತಮ್ಮ ಶಿಕ್ಷಣವನ್ನು ಪೂರೈಸಿದ್ದರು.

ಸೋಮಶೇಖರ್ ರಾಜು ಅವರ ನೇಮಕದಿಂದಾಗಿ ಬಹಳ ವರ್ಷಗಳ ನಂತರ ಕನ್ನಡಿಗರೊಬ್ಬರಿಗೆ ಸೇನೆಯಲ್ಲಿ ಎರಡನೇ ಅತ್ಯುನ್ನತ ಸ್ಥಾನ ಸಿಕ್ಕಿದಂತಾಗಿದೆ. ರಾಜು ಅವರ ನೇಮಕದ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...