ಭಾರತೀಯ ಸೇನೆ ಸೇರಬಯಸುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸತಿಯುತ ನಾಲ್ಕು ತಿಂಗಳ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡಲು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಯಾವುದಾದರೂ ಒಂದು ವಸತಿ ಶಾಲೆಯಲ್ಲಿ ತರಬೇತಿ ನೀಡಲಾಗುತ್ತಿದ್ದು, ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು ಈ ಮೂರು ಜಿಲ್ಲೆಗಳ ಪೈಕಿ ಯಾವ ಜಿಲ್ಲೆಯಲ್ಲಿ ತರಬೇತಿ ಪಡೆಯಲು ಇಚ್ಚಿಸುತ್ತಾರೋ ಆ ಜಿಲ್ಲೆಯ ಜಂಟಿ / ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಅಥವಾ ನೋಂದಾಯಿತ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 5 ಲಕ್ಷದೊಳಗಿರಬೇಕು ಹಾಗೂ ಕರ್ನಾಟಕದ ನಿವಾಸಿಯಾಗಿರಬೇಕು. ಅಭ್ಯರ್ಥಿಯು ಅಕ್ಟೋಬರ್ 1, 2000 ದಿಂದ ಏಪ್ರಿಲ್ 1, 2005 ರ ನಡುವೆ ಜನಿಸಿರಬೇಕು. ಹಾಗೂ 10ನೇ ತರಗತಿ ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಸಲು ಆಗಸ್ಟ್ 15 ಅಂತಿಮ ದಿನಾಂಕವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖೆಯ ವೆಬ್ಸೈಟ್ https://sw.kar.nic.in ನಿಂದ ಪಡೆಯಬಹುದಾಗಿದೆ.