ಚಿತ್ರದುರ್ಗ: ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಪಾದಯಾತ್ರೆಗೆ ಬಂದಿದ್ದ ಕಾರ್ಯಕರ್ತನಿಗೆ ಬಸ್ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಇಂದು ಹಿರಿಯೂರು ನಗರದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆ ಸಾಗರ ಸಮೀಪದ ಉತ್ತದಿಂಬಾ ಮೂಲದ ರಮೇಶ್ (35) ಮೃತ ದುರ್ದೈವಿ.
ಸೋಮವಾರ ಬೆಳಿಗ್ಗೆ ಸಾಗರ ವಿಧಾನಸಭಾ ಕ್ಷೇತ್ರದಿಂದ ಪಾದಯಾತ್ರೆಗೆ ಆಗಮಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಮಧ್ಯಾಹ್ನ ಊಟ ಮುಗಿಸಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದರು.
ಈ ವೇಳೆ ರಮೇಶ್, ಹಿರಿಯೂರು ನಗರದ ಕೋರ್ಟ್ ಸಮೀಪದಲ್ಲಿ ರಸ್ತೆ ದಾಟುತ್ತಿರುವಾಗ ಮೂಡಿಗೆರೆ ಕ್ಷೇತ್ರದಿಂದ ಪಾದಯಾತ್ರೆಗೆ ಜನರನ್ನು ಕರೆತಂದಿದ್ದ ಖಾಸಗಿ ಬಸ್, ಅವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರಮೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಹಿರಿಯೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.