alex Certify ‘ಭಾರತ್ ಜೋಡೋ’ ಯಾತ್ರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೊಂಬಾಟ್ ಡಾನ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಭಾರತ್ ಜೋಡೋ’ ಯಾತ್ರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೊಂಬಾಟ್ ಡಾನ್ಸ್

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದು, ಕರ್ನಾಟಕ ಪ್ರವೇಶಿಸಿ ಈಗಾಗಲೇ 12 ದಿನಗಳು ಕಳೆದಿವೆ. ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಿಂದ ಈ ಯಾತ್ರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಸದ್ಯ ಚಿತ್ರದುರ್ಗದಿಂದ ಬಳ್ಳಾರಿಗೆ ತೆರಳಲಾಗುತ್ತಿದೆ.

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯವರೊಂದಿಗೆ ಹುರುಪಿನಿಂದ ಪಾಲ್ಗೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರೊಂದಿಗೆ ಓಡುವ ಮೂಲಕ ಈ ವಯಸ್ಸಿನಲ್ಲೂ ತಾವೆಷ್ಟು ಫಿಟ್ ಎಂಬುದನ್ನು ತೋರಿಸಿದ್ದರು. ಇದೀಗ ಯಾತ್ರೆಯ ಮಧ್ಯೆ ವಾದ್ಯಕ್ಕೆ ಹೆಜ್ಜೆ ಹಾಕುವ ಮೂಲಕ ಮತ್ತೊಮ್ಮೆ ತಮ್ಮ ಅಭಿಮಾನಿಗಳಿಗೆ ಖುಷಿ ನೀಡಿದ್ದಾರೆ.

ಬುಧವಾರದಂದು ಮಳೆಯಲ್ಲಿ ನೆನೆದಿದ್ದರೂ ಸಹ ಇಂದು ಎಂದಿನ ಹುರುಪಿನಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಸಿದ್ದರಾಮಯ್ಯನವರು ಪಾಲ್ಗೊಂಡಿದ್ದು, ಈ ವೇಳೆ ವಾದ್ಯದ ಸದ್ದಿಗೆ ಮೈಕುಣಿಸಿದ್ದಾರೆ. ಅಷ್ಟೇ ಅಲ್ಲ ತಮ್ಮೊಂದಿಗೆ ಸೆಲ್ಫಿ ತೆಗೆಸಿಕೊಳ್ಳಲು ಬಂದವರಿಗೆ ನಗುನಗುತ್ತಲೇ ಅವಕಾಶ ಕೊಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...