
ಈಗಾಗಲೇ ದಕ್ಷಿಣ ಭಾರತದಲ್ಲಿ ಹಾದು ಹೋಗಿರುವ ಈ ಯಾತ್ರೆ ಮಹಾರಾಷ್ಟ್ರದ ಮೂಲಕ ಉತ್ತರ ಭಾರತ ತಲುಪಿದೆ.
ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಹಲವು ಗಣ್ಯರು ಸಾಥ್ ನೀಡಿದ್ದು, ಇದೀಗ ಬಾಲಿವುಡ್ ನಟಿ ಸ್ವರ ಭಾಸ್ಕರ್ ಕೂಡ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.