alex Certify ‘ಭಾರತ್ ಜೋಡೋ’ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ರಾಮಾಯಣ ಪಾತ್ರಧಾರಿಗಳು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಭಾರತ್ ಜೋಡೋ’ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ರಾಮಾಯಣ ಪಾತ್ರಧಾರಿಗಳು…!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕೈಗೊಂಡಿರುವ ‘ಭಾರತ್ ಜೋಡೋ’ ಯಾತ್ರೆ ಕರ್ನಾಟಕ ಪ್ರವೇಶಿಸಿ ಈಗಾಗಲೇ 13 ದಿನ ಕಳೆದಿದ್ದು, ನಾಳೆ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಬೃಹತ್ ಐಕ್ಯತಾ ಸಮಾವೇಶ ನಡೆಯಲಿದೆ.

ಬಳ್ಳಾರಿಯ ಮುನ್ಸಿಪಲ್ ಮೈದಾನದಲ್ಲಿ ಐಕ್ಯತಾ ಸಮಾವೇಶ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಅದ್ದೂರಿ ಸಿದ್ದತೆ ಕೈಗೊಳ್ಳಲಾಗಿದೆ. ಈ ಸಮಾವೇಶದಲ್ಲಿ 3 ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದ್ದು, ಈಗಾಗಲೇ ವಿವಿಧ ಜಿಲ್ಲೆಗಳಿಂದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಆಗಮಿಸುತ್ತಿದ್ದಾರೆ.

ಇದರ ಮಧ್ಯೆ ಇಂದಿನ ಪಾದಯಾತ್ರೆ ವೇಳೆ ರಾಹುಲ್ ಗಾಂಧಿಯವರೊಂದಿಗೆ, ರಾಮಾಯಣದ ಪಾತ್ರಧಾರಿ ವೇಷ ಧರಿಸಿದ ಕಲಾವಿದರು ಹೆಜ್ಜೆ ಹಾಕಿದ್ದಾರೆ. ರಾಮ, ಲಕ್ಷ್ಮಣ, ಹನುಮಂತ ಮೊದಲಾದ ವೇಷ ಧರಿಸಿದ್ದವರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು, ಇದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...