alex Certify ಭಾರತ – ಪಾಕಿಸ್ತಾನ ಹೈವೋಲ್ಟೇಜ್ ಮ್ಯಾಚ್ ಸಂದರ್ಭದಲ್ಲಿ ಅಭಿಮಾನಿ ಬಳಿ ಅಪ್ಪು ‘ಗಂಧದಗುಡಿ’ ಪೋಸ್ಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತ – ಪಾಕಿಸ್ತಾನ ಹೈವೋಲ್ಟೇಜ್ ಮ್ಯಾಚ್ ಸಂದರ್ಭದಲ್ಲಿ ಅಭಿಮಾನಿ ಬಳಿ ಅಪ್ಪು ‘ಗಂಧದಗುಡಿ’ ಪೋಸ್ಟರ್

T20 World Cup: ಭಾರತ–ಪಾಕ್ ಪಂದ್ಯ ನಡೆದ ಎಂಸಿಜಿಯಲ್ಲಿಯೂ ಗಂಧದಗುಡಿ | Prajavani

ಭಾನುವಾರದಂದು ನಡೆದ ಟಿ20 ವಿಶ್ವಕಪ್ ನ ಮೊದಲ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ ರೋಚಕ ಜಯ ಸಾಧಿಸಿದೆ. ಆಸ್ಟ್ರೇಲಿಯಾದ ಮೆಲ್ಬೋರ್ನ್ ನಲ್ಲಿ ನಡೆದ ಈ ಪಂದ್ಯವನ್ನು ಸ್ಟೇಡಿಯಂನಲ್ಲಿ ಮಾತ್ರವಲ್ಲದೆ ಸ್ಪೋರ್ಟ್ಸ್ ಚಾನೆಲ್ ಮೂಲಕ ವಿಶ್ವದ ಕೋಟ್ಯಾಂತರ ಮಂದಿ ವೀಕ್ಷಿಸಿದ್ದಾರೆ.

ಈ ಪಂದ್ಯದಲ್ಲಿ ವಿರಾಟ್ ಅದ್ಭುತ ಪ್ರದರ್ಶನ ನೀಡಿದ್ದು, ತಾವು ಕಿಂಗ್ ಕೊಹ್ಲಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಕೇವಲ 53 ಎಸೆತಗಳಲ್ಲಿ ವಿರಾಟ್ ಕೊಹ್ಲಿ ಬರೋಬ್ಬರಿ 82 ರನ್ ಗಳನ್ನು ಗಳಿಸಿದ್ದು, ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ.

ಈ ಪಂದ್ಯವನ್ನು ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ವೀಕ್ಷಿಸಿರುವ ಕರ್ನಾಟಕ ಮೂಲದ ಸುಕುಮಾರ್ ಎಂಬವರು, ಇದೇ ಸಂದರ್ಭದಲ್ಲಿ ತಮ್ಮ ಸ್ನೇಹಿತರೊಂದಿಗೆ ಪುನೀತ್ ರಾಜಕುಮಾರ್ ಅವರ ‘ಗಂಧದಗುಡಿ’ ಪೋಸ್ಟರ್ ಹಿಡಿದು ಫೋಟೋ ಕ್ಲಿಕ್ಕಿಸಿಕೊಂಡಿದ್ದು ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...