ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಮೂರು ಏಕದಿನ ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳು ಮುಕ್ತಾಯಗೊಂಡಿದ್ದು, ಎರಡು ತಂಡಗಳು ತಲಾ ಒಂದೊಂದು ಪಂದ್ಯದಲ್ಲಿ ಜಯಭೇರಿ ಸಾಧಿಸಿವೆ.
ಇಂದು ಅಂತಿಮ ಪಂದ್ಯ ಗೆದ್ದು ಸರಣಿ ಕೈ ವಶಪಡಿಸಿಕೊಳ್ಳಲು ಎರಡು ತಂಡಗಳು ಕಾದಾಟ ನಡೆಸಲಿವೆ. ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಭಾರತದ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಸೇರಲಿದ್ದಾರೆ
ಎರಡನೇ ಪಂದ್ಯದಲ್ಲಿ ದೂರ ಉಳಿದಿದ್ದ ನಾಯಕ ರೋಹಿತ್ ಶರ್ಮ ಹಾಗೂ ವಿರಾಟ್ ಕೊಹ್ಲಿ ಇಂದಿನ ಪಂದ್ಯದಲ್ಲಿ ಸೇರ್ಪಡೆಯಾಗುವ ಸಾಧ್ಯತೆ ಇದೆ. ಮತ್ತೊಂದೆಡೆ ಯುವ ಕ್ರಿಕೆಟಿಗರಿಗೆ ಏಕದಿನ ವಿಶ್ವಕಪ್ ಗೆ ಸ್ಥಾನಗಿಟ್ಟಿಸಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಲಿದೆ. ರಾತ್ರಿ 7 ಗಂಟೆಗೆ ಡಿಡಿ ಸ್ಪೋರ್ಟ್ಸ್ ನಲ್ಲಿ ಪಂದ್ಯ ಪ್ರಸಾರವಾಗಲಿದೆ.