ಚೆನ್ನೈ: ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮಳೆಯ ಅವಾಂತರದಿಂದಾಗಿ ಮನೆ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ 9 ಜನ ಸಾವನ್ನಪ್ಪಿರುವ ಘಟನೆ ವೆಲ್ಲೂರು ಜಿಲ್ಲೆಯ ಪೆರ್ನಂಪಟ್ಟು ಪ್ರದೇಶದಲ್ಲಿ ನಡೆದಿದೆ.
ಮನೆ ಗೋಡೆ ಕುಸಿದ ಪರಿಣಾಮ ನಾಲ್ವರು ಮಹಿಳೆಯರು, ನಾಲ್ವರು ಮಕ್ಕಳು ಹಾಗೂ ಓರ್ವ ಪುರುಷ ಸೇರಿದಂತೆ ಒಂದೇ ಕುಟುಂಬದ 9 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದುರಂತಕ್ಕೆ ಸಂಬಂಧಿಸಿದಂತೆ ಸಂತಾಪ ಸೂಚಿಸಿರುವ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಮೃತರ ಸಂಬಂಧಿಕರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಿಸಿದ್ದಾರೆ.