ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಿಎಂ, ಮುಂಗಾರು ಆರಂಭದಲ್ಲಿಯೇ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಕಾಳಜಿ ಕೇಂದ್ರ ವ್ಯವಸ್ಥೆ ಮಾಡಬೇಕು. ಕಾಳಜಿ ಕೇಂದ್ರಗಳಲ್ಲಿ ಊಟೋಪಚಾರ, ಮೂಲಭೂತ ಸೌಲಭ್ಯಕ್ಕೆ ಆದ್ಯತೆ ನೀಡುವಂತೆ ಸೂಚಿಸಿದ್ದಾರೆ.
ತಗ್ಗು ಪ್ರದೇಶಗಳ ಜನತೆಯ ಸ್ಥಳಾಂತರ ಮಾಡಬೇಕು. ಭೂಕುಸಿತವುಂಟಾಗಬಹುದಾದ ಸ್ಥಳಗಳ ಗುರುತು ಮಾಡಿ ತಕ್ಷಣ ಕಾರ್ಯಪ್ರವೃತ್ತರಾಗಬೇಕು. ತ್ವರಿತ ಪರಿಹಾರ ಕಾರ್ಯಗಳಿಗೆ ವಾಹನ ವ್ಯವಸ್ಥೆ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ.
ಮಳೆಯಿಂದ ಈಗಾಗಲೇ ಹಾನಿಗೊಳಗಾದ ಜಿಲ್ಲೆಗಳಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಸಿಎಂ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.