ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಗಾಯಗೊಂಡಿರುವ ಹಿರಿಯ ನಟನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಮೂರು ದಿನಗಳ ಹಿಂದೆಯೇ ನಟ ಶಿವರಾಮ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಹೊಸಕೆರೆ ಹಳ್ಳಿ ಬಳಿಯ ಖಾಸಗಿ ಆಸ್ಪತ್ರೆಗೆ ಶಿವರಾಮ್ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದ ಶಿವರಾಮ್ ಡಿಸ್ಚಾರ್ಜ್ ಆಗಿದ್ದರು. ಆದರೆ ಮನೆಗೆ ಮರಳಿದ ಬಳಿಕ ಮತ್ತೆ ಅವರ ಸ್ಥಿತಿ ಗಂಭೀರವಾಗಿದೆ.
ಲಿಂಗ ಬದಲಾವಣೆ ಶಸ್ತ್ರ ಚಿಕಿತ್ಸೆಗೆ ಮುಂದಾದ ಮಹಿಳಾ ಪೇದೆ
ಪ್ರಸ್ತುತ ಖಾಸಗಿ ಆಸ್ಪತ್ರೆಗೆ ಶಿವರಾಮ್ ಅವರನ್ನು ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.