alex Certify ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಎಸಿಬಿ ಶಾಕ್;‌ ಶಿವಮೊಗ್ಗದಲ್ಲೂ ಮುಂದುವರಿದ ಕಾರ್ಯಾಚರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಎಸಿಬಿ ಶಾಕ್;‌ ಶಿವಮೊಗ್ಗದಲ್ಲೂ ಮುಂದುವರಿದ ಕಾರ್ಯಾಚರಣೆ

ಶಿವಮೊಗ್ಗ: ರಾಜ್ಯದ ವಿವಿಧ ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹದಳ(ಎಸಿಬಿ) ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆ ಬಾಗಿಲು ಬಡಿದಿದ್ದಾರೆ.
ರಾಜ್ಯದ 21 ಅಧಿಕಾರಿಗಳಿಗೆ ಸೇರಿದ 80 ಸ್ಥಳಗಳಲ್ಲಿ ಸುಮಾರು 400 ಕ್ಕೂ ಅಧಿಕ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಸುಖನಿದ್ರೆಯಲ್ಲಿದ್ದ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.

ಶಿವಮೊಗ್ಗದ ಎಲ್.ಬಿ.ಎಸ್. ನಗರದ ಮೊದಲ ತಿರುವಿನಲ್ಲಿರುವ ಡಿಸಿಇ -ಎಲೆಕ್ಟ್ರಿಕಲ್ ಉಪ ಆಯುಕ್ತರ ಕಚೇರಿಯ ನಿರೀಕ್ಷಕ ಸಿದ್ದಪ್ಪ ಅವರ ‘ಶಿವಶಂಕರ’ ನಿವಾಸದ ಮೇಲೆ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗದ ಎಸಿಬಿ ಇನ್ಸ್ ಪೆಕ್ಟರ್ ಲೋಕೇಶ್ ನೇತೃತ್ವದಲ್ಲಿ ಬೆಳಗ್ಗೆಯಿಂದಲೇ ಕಾರ್ಯಾಚರಣೆ ನಡೆಸಿದ್ದು, ಸಿದ್ದಪ್ಪ ಅವರಿಗೆ ಸೇರಿದ ಹೊನ್ನಾಳಿಯ ಮನೆ, 10 ಎಕರೆ ಜಮೀನು ಹೊಂದಿರುವ ಮಾಹಿತಿಯನ್ನು ಅಧಿಕಾರಿಗಳು ಪಡೆದಿದ್ದು, ಪರಿಶೀಲನೆ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...