ಮಂಗನ ಕಾಯಿಲೆ ಪೀಡಿತರಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಾಗರ ತಾಲೂಕು ಅರಳಗೋಡು ಗ್ರಾಮ ಪಂಚಾಯಿತಿ ಸದಸ್ಯ 56 ವರ್ಷದ ರಾಮಸ್ವಾಮಿ ಕರುಮನೆ ಸಾವನ್ನಪ್ಪಿದವರಾಗಿದ್ದು, ಇವರನ್ನು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಏಪ್ರಿಲ್ 24ರಂದು ರಾಮಸ್ವಾಮಿ ಅವರಿಗೆ ಜ್ವರ ಕಾಣಿಸಿಕೊಂಡಿತ್ತೆನ್ನಲಾಗಿದ್ದು, ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.