ಮಂಗಳಮುಖಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಪುನರ್ವಸತಿ ಯೋಜನೆಯನ್ನು ಸರ್ಕಾರ ರೂಪಿಸಿದ್ದು, ಇದಕ್ಕೆ ಜೂನ್ 14ರಂದು ಬೆಂಗಳೂರಿನಲ್ಲಿ ಶಂಕುಸ್ಥಾಪನೆ ನೆರವೇರಲಿದೆ.
ಈ ಪುನರ್ವಸತಿ ಯೋಜನೆಗಾಗಿ ಬೆಂಗಳೂರಿನ ಕೆಂಗೇರಿ ಹೋಬಳಿಯ ಮಾರಗೊಂಡನಹಳ್ಳಿಯಲ್ಲಿ 2.20 ಎಕರೆ ಜಮೀನು ಮಂಜೂರು ಮಾಡಲಾಗಿದ್ದು, ಸುಮಾರು 200 ಮಂದಿಗೆ ಪುನರ್ವಸತಿ ಕಲ್ಪಿಸಲಾಗುತ್ತದೆ ಎಂದು ತಿಳಿದುಬಂದಿದೆ.
ರಾಜ್ಯಸಭಾ ಚುನಾವಣೆ ಬಳಿಕ ರಿಲ್ಯಾಕ್ಸ್ ಮೂಡ್ ನಲ್ಲಿ ‘ಕುರುಕ್ಷೇತ್ರ’ ನಾಟಕ ವೀಕ್ಷಿಸಿದ ಸಿದ್ದರಾಮಯ್ಯ
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಈ ಯೋಜನೆಯನ್ನು ರೂಪಿಸಲಾಗಿದ್ದು, ಜೂನ್ 14ರಂದು ವಸತಿ ಸಚಿವ ವಿ. ಸೋಮಣ್ಣ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಆಗಮಿಸಲಿದ್ದು, ಕೊಳಗೇರಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹೇಶ ಈರನಗೌಡ ಕುಮಟಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ.